ರಾಜಕೀಯ
ರಾಜಣ್ಣ ವಜಾ ಪಕ್ಷದ ತೀರ್ಮಾನ; ನನಗೂ ನೋವಾಗಿದೆ: ಡಿಸಿಎಂ
“ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಉತ್ತರಿಸಿದರು. ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಯಿತೇ ಎಂದು ಕೇಳಿದಾಗ,”ಇದರಿಂದ ನನಗೂ
ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಕ್ಕೆ ರೈಲ್ವೆ ಸಚಿವರಿಗೆ ಸಂಸದ ಬೊಮ್ಮಾಯಿ ಮನವಿ
ಗದಗ- ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ ರೈಲ್ವೆ
ಕೋಲಾರ, ಚಿಕ್ಕಬಳ್ಳಾಪುರಕ್ಕೆ 2027 ಮಾರ್ಚ್ಗೆ ಎತ್ತಿನಹೊಳೆ ನೀರು: ಡಿಕೆ ಶಿವಕುಮಾರ್
ಕೋಲಾರ, ಚಿಕ್ಕಬಳ್ಳಾಪುರಕ್ಕೆ 2027 ಮಾರ್ಚ್ ವೇಳೆಗೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಶಾಸಕ ವೆಂಕಟಶಿವಾರೆಡ್ಡಿ ಮಂಡಿಸಿದ್ದ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿತ್ತು.
ಸಂಪುಟದಿಂದ ಕೆಎನ್ ರಾಜಣ್ಣ ವಜಾ: ರಾಜ್ಯಪಾಲರಿಂದ ಅಂಕಿತ
ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಕೆಎನ್ ರಾಜಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ಪತ್ರಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ
ಚುನಾವಣಾ ಆಯೋಗದ ನೋಟಿಸ್ಗೆ ಹೆದರೋದಿಲ್ಲ: ಡಿಕೆ ಶಿವಕುಮಾರ್
“ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ ನೋಟಿಸ್ ಗೆಲ್ಲ ನಾವು ಹೆದರುವುದಿಲ್ಲ” ಎಂದು
ಬೆಂಗಳೂರು ಟೆಕ್ ಸಮಿಟ್ 2025 ವಿಶ್ವಕ್ಕೆ ದೊಡ್ಡ ಸಂದೇಶ ರವಾನಿಸಬೇಕು: ಡಿಸಿಎಂ
ನವೆಂಬರ್ ನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮಿಟ್ 2025 ಇಡೀ ವಿಶ್ವಕ್ಕೆ ದೊಡ್ಡ ಸಂದೇಶ ರವಾನಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಬೆಂಗಳೂರು ಟೆಕ್ ಸಮಿಟ್ 2025 ಕುರಿತು ಖಾಸಗಿ ಹೊಟೇಲ್ ನಲ್ಲಿ ಡೆದ ಪೂರ್ವಭಾವಿ ಸಭೆ ಹಾಗೂ ಉದ್ಯಮಿಗಳ
ಸಹಕಾರಿ ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ?
ಸಹಕಾರ ಸಚಿವ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಂದ ಬೇಸತ್ತ ಹೈಕಮಾಂಡ್ ಸಲಹೆ ಮೇರೆಗೆ ಸಿಎಂ ರಾಜೀನಾಮೆಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಈ ವರ್ಷ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ
ಈ ವರ್ಷ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ ಎಂದು ಹೈಕೋರ್ಟ್ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯನ್ನಾಗಿ ಬದಲಾಯಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿ, ಕಾರಣಾಂತರಗಳಿಂದ ಮುಂದೂಡುತ್ತಾ ಬರಲಾಗಿತ್ತು. ಬಿಬಿಎಂಪಿ
ಬಿಜೆಪಿ ಅಧಿಕಾರದಲ್ಲಿದ್ದಾಗ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸಿಲ್ಲ ಏಕೆ: ರಾಮಲಿಂಗಾರೆಡ್ಡಿ
ನಮ್ಮ ಸರ್ಕಾರ ಪಾರದರ್ಶಕವಾಗಿದ್ದು, ಧರ್ಮಸ್ಥಳ ಪ್ರಕರಣವನ್ನು ಈ ಹಿಂದೆ ಸಿಬಿಐ ತನಿಖೆಗೆ ಕೊಡಲಾಗಿತ್ತು. ಈಗ ಎಸ್ಐಟಿಗೆ ವಹಿಸಲಾಗಿದೆ. ಬಿಜೆಪಿಯವರು 4 ವರ್ಷ ಅಧಿಕಾರದಲ್ಲಿದ್ದರೂ ಯಾಕೆ ಸರಿಯಾದ ತನಿಖೆ ಮಾಡಿಸಲಿಲ್ಲ, ಈಗ ತನಿಖೆ ಆಗುತ್ತಿದೆ. ಹೀಗಾಗಿ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಬಿಜೆಪಿಯವರ
ಬಿಜೆಪಿಯ ಕೆಲವು ಖಾಲಿ ಟ್ರಂಕ್ಗಳು ಶಬ್ದ ಮಾತ್ರ ಮಾಡುತ್ತವೆ: ಡಿಕೆ ಶಿವಕುಮಾರ್
ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದರು. ಬೆಂಗಳೂರು ನಗರದ